Breaking News

ಕಾಂಗ್ರೆಸ್ ಟೀಕೆ ಮಾಡುವುದೇ ಬಿಜೆಪಿಯವರ ಕೆಲಸವಾಗಿದೆ : ಸಚಿವ ಸಿ.ಎಂ.ಇಬ್ರಾಹಿಂ ಆಕ್ರೋಶ

ಹುಬ್ಬಳ್ಳಿ: ರಾಜ್ಯದಲ್ಲಿ ವಿರೋಧ ಪಕ್ಷ ವಿರೋಧಪಕ್ಷದ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ. ಅಭಿವೃದ್ಧಿ, ನಿರುದ್ಯೋಗ, ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಮಾತನಾಡದೇ ಬಿಜೆಪಿಯವರು ಬೇರೆಯದೇ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವು ದಿನಕ್ಕೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬಗ್ಗೆ ಮಾತನಾಡುತ್ತಾರೆ. ನಿಮ್ಮ ಅಧಿಕಾರದ ಅವಧಿಯಲ್ಲಿ ನೀವು ಏನು ಮಾಡಿ ಬಂದಿದ್ದೀರಾ? ನಿಮ್ಮ ಮನವ ಸಂತೈಸಿಕೊಳ್ಳಿ ಎಂದು ಲೇವಡಿ ಮಾಡಿದರು.

ಮುಡಾ ಹಗರಣ ಕೋರ್ಟ್ ನಲ್ಲಿದೆ. ಬಿಜೆಪಿಯವರು ಏನಾದರೂ ದಾಖಲೆಗಳಿದ್ದರೇ ಕೋರ್ಟ್ ಮುಂದಿಡಿ. ಕೋರ್ಟ್‌ ತೀರ್ಮಾನ ಮಾಡುತ್ತದೆ. ರಾಜ್ಯದಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡದೇ ಕಾಂಗ್ರೆಸ್ ಟೀಕೆ ಮಾಡುವುದೇ ಬಿಜೆಪಿಯವರ ಕೆಲಸವಾಗಿದೆ ಎಂದು ಅವರು ಹೇಳಿದರು.

Share News

About Shaikh BigTv

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *