Breaking News

ಭಾರತದ ಸಂಸ್ಕೃತಿ ಆಚಾರ ವಿಚಾರ ವಿರೋಧಿಸುವವರ ಪರವಾಗಿಯೇ ಕಾಂಗ್ರೆಸ್‌ ಇರುತ್ತದೆ : ಬೆಲ್ಲದ

ಹುಬ್ಬಳ್ಳಿ: ಒಬ್ಬರು ಉತ್ತಮ ಶಿಕ್ಷಕರು ಅಂದರೆ ಅವರು ಉತ್ತಮ ಶಿಕ್ಷಕರೇ. ಶಿಕ್ಷಕರ ವೈಯಕ್ತಿಕ ವಿಚಾರ ಇಟ್ಟುಕೊಂಡು ಪ್ರಶಸ್ತಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಈ ಹಿಂದಿನಿಂದಲೂ ಕಾಂಗ್ರೆಸ್ ವೈಯಕ್ತಿಕ ನಂಬಿಕೆಯ ಮೇಲೆಯೇ ಪ್ರಶಸ್ತಿ ನೀಡುತ್ತಾ ಬಂದಿದೆ. ಮೊದಲಿನಿಂದಲೂ ಕಾಂಗ್ರೆಸ್‌ ಲೆಪ್ಟಿಸ್ಟ್ ಪರವಾಗಿಯೇ ಇದೆ. ಭಾರತದ ಸಂಸ್ಕೃತಿ ಆಚಾರ ವಿಚಾರ ವಿರೋಧಿಸುವವರ ಪರವಾಗಿಯೇ ಕಾಂಗ್ರೆಸ್‌ ಇರುತ್ತದೆ
ಎಂದು ಶಾಸಕ ಅರವಿಂದ ಬೆಲ್ಲದ ಕಿಡಿ ಕಾರಿದರು.

ಹಿಜಾಬ್ ಪ್ರಕರಣದಲ್ಲಿ ಭಾಗಿಯಾದ ಕಾರಣ ಉಡುಪಿ ಪ್ರಾಂಶುಪಾಲ ರಾಮಕೃಷ್ಣ ಅವರ ಹೆಸರನ್ನು ಸರ್ಕಾರ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿಯಿಂದ ಕೈಬಿಟ್ಟಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬೆಲ್ಲದ ಅವರು, ದೇಶದ ಸಂಸ್ಕೃತಿ ವಿರೋಧಿಸುವವರಿಗೆ ಈ ಕಾಂಗ್ರೆಸ್ ಪದ್ಮಶ್ರೀಯಂತಹ ಪ್ರಶಸ್ತಿ ನೀಡಿದೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಪ್ರಶಸ್ತಿಗಳಿಗೆ ಗೌರವ ಸಿಗುವ ನಿಟ್ಟಿನಲ್ಲಿ ಕೆಲಸವಾಗುತ್ತಿವೆ. ನಿಸ್ವಾರ್ಥ ಸಮಾಜ ಸೇವಕರನ್ನು ಗುರುತಿಸಿ ಈಗ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ವೈಯಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರಶಸ್ತಿಯಿಂದ ಕೈ ಬಿಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Share News

About Shaikh BigTv

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *