Breaking News

ಇಂದು ಸಿಎಂ ಸಿದ್ದರಾಮಯ್ಯರಿಂದ ಎತ್ತಿನಹೊಳೆ ಯೋಜನೆ ಉದ್ಘಾಟನೆ

ಬೆಂಗಳೂರು: ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗೆ ಗೌರಿ ಹಬ್ಬದಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ.
ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ. ಹೆಬ್ಬನಹಳ್ಳಿ ವಿತರಣಾ ತೊಟ್ಟಿ 4 ರಿಂದ 32 ಕಿ. ಮೀ. ದೂರದಲ್ಲಿ ಎಸ್ಕೇಪ್ ಚಾನೆಲ್ ಮಾಡಿದ್ದು, ಅಲ್ಲಿಂದ ನಾಲೆ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಲಾಗುವುದು. ನವೆಂಬರ್ 1 ರ ವೇಳೆಗೆ ಸುಮಾರು 5 ಟಿಎಂಸಿ ನೀರನ್ನು ಮೇಲಕ್ಕೆ ಎತ್ತಲಾಗುವುದು. ಅರಣ್ಯ ಇಲಾಖೆಯಿಂದ 502 ಎಕರೆ ಜಮೀನು ಪಡೆಯಬೇಕಾಗಿದ್ದು, ಇದಕ್ಕೆ ಬದಲಿಯಾಗಿ ನಾವು 452 ಎಕರೆ ಜಮೀನು ನೀಡಿದ್ದೇವೆ. ಮುಂದಿನ 4 ತಿಂಗಳಲ್ಲಿ ಈ ಕೆಲಸ ಮುಗಿಯಲಿದ್ದು, ಆನಂತರ ತುಮಕೂರು ಭಾಗದ ಕೆಲಸವನ್ನು ತ್ವರಿತವಾಗಿ ಮುಗಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರವು 2014 ರಲ್ಲಿ ಏಳು ಬರಡು ಜಿಲ್ಲೆಗಳ ನೀರಿನ ಬವಣೆಯನ್ನು ನಿವಾರಿಸಲು ರೂಪಿಸಲಾದ 12,912.36 ಕೋಟಿ ರೂ.ಗಳ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿತ್ತು. ಅರಣ್ಯ ಭೂಮಿ ಸೇರಿದಂತೆ ಭೂಸ್ವಾಧೀನಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳು ಯೋಜನೆಯ ಪ್ರಗತಿಗೆ ಅಡ್ಡಿಯಾಗಿವೆ. ಸಮಸ್ಯೆ ಬಗೆಹರಿದ ನಂತರ ಕಾಲುವೆಗಳಿಗೆ ಮತ್ತು ವಾಣಿ ವಿಲಾಸ ಸಾಗರ ಅಣೆಕಟ್ಟಿಗೆ ನೀರು ಹರಿಯಲಿದೆ. ಪ್ರಸ್ತುತ, ಏಳು ಅಣೆಕಟ್ಟುಗಳಿಂದ ನೀರನ್ನು ಎತ್ತಲಾಗುತ್ತಿದೆ ಎಂದು ಹೇಳಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *