Breaking News

ಎತ್ತಿನಹೊಳೆ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಹಾಸನ: ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ ತೊಟ್ಟಿ 3ರಲ್ಲಿ ನೀರೆತ್ತುವ ಪಂಪ್ ಹಾಗೂ ಮೋಟಾರ್​ಗಳನ್ನು ಆನ್​ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯೋಜನೆಯ ಮೊದಲ ಹಂತವನ್ನು ಲೋಕಾರ್ಪಣೆಗೊಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸಾಥ್​ ನೀಡಿದರು. ಅಲ್ಲದೇ ಇದೇ ವೇಳೆ ಏಳು ಸಚಿವರಿಂದ ದೊಡ್ಡನಗರದಲ್ಲೇ ನೀರನ್ನೆತ್ತುವ ಏಳು ವಿಯರ್​​ಗಳಿಗೂ ಚಾಲನೆ ನೀಡಲಾಯಿತು. ಇದಕ್ಕೂ ಮೊದಲು ಬೆಳಗ್ಗೆ 8.30ರಿಂದ ಉದ್ಘಾಟನಾ ಸ್ಥಳದಲ್ಲಿ ಹೋಮ ಹವನ ನೆರವೇರಿತು. ಕಾರ್ಯಕ್ರಮದ ಉಸ್ತುವಾರಿಯನ್ನು ಜಲಸಂಪನ್ಮೂಲ ಇಲಾಖೆ ಸಚಿವ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಹಿಸಿದ್ದರು.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *