Breaking News

ನೀರಜ್ ಚೋಪ್ರಾ ಡೈಮಂಡ್ ಲೀಗ್ ಫೈನಲ್‌ಗೆ ಪ್ರವೇಶ

ನವದೆಹಲಿ: ಬೆಲ್ಜಿಯಂನ ಬ್ರಸೆಲ್ಸ್‌ನಲ್ಲಿ ನಡೆಯಲಿರುವ ಡೈಮಂಡ್ ಲೀಗ್ ಫೈನಲ್‌ಗೆ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಭಾರತದ ತಾರೆ ನೀರಜ್ ಚೋಪ್ರಾ ಪ್ರವೇಶಿಸಿದ್ದಾರೆ.
14 ಸಿರೀಸ್‌ಗಳ ಅಂತ್ಯಕ್ಕೆ ನೀರಜ್ ಅವರು ಒಟ್ಟಾರೆಯಾಗಿ ನಾಲ್ಕನೇ ಸ್ಥಾನ ಗಳಿಸಿದರು ಸೆಪ್ಟೆಂಬರ್ 13 ಹಾಗೂ 14ರಂದು ಬ್ರಸೆಲ್ಸ್‌ನಲ್ಲಿ ಡೈಮಂಡ್ ಲೀಗ್ ಫೈನಲ್ ನಡೆಯಲಿದೆ.
ದೋಹಾ ಹಾಗೂ ಲೂಸಾನ್ ಆವೃತ್ತಿಗಳಲ್ಲಿ ಎರಡನೇ ಸ್ಥಾನ ಗಳಿಸಿರುವ ಚೋಪ್ರಾ ಒಟ್ಟು 14 ಅಂಕ ಗಳಿಸಿದ್ದರು. ಜ್ಯೂರಿಕ್‌ ಆವೃತ್ತಿಯಲ್ಲಿ ನೀರಜ್ ಭಾಗವಹಿಸಿರಲಿಲ್ಲ.
2021 ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದಿದ್ದ ನೀರಜ್, ಗಾಯದ ಹೊರತಾಗಿಯೂ ಕಳೆದ ತಿಂಗಳು ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕದ ಸಾಧನೆ ಮಾಡಿದ್ದರು. ಪ್ಯಾರಿಸ್‌ನಲ್ಲಿ 89.45 ಮೀ. ದೂರ ಜಾವೆಲಿನ್ ಎಸೆದಿದ್ದರು.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *