Breaking News

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಸುಮಾರು ಮೂರು ರಾಜ್ಯಗಳಲ್ಲಿ ಅವಾಂತರಗಳ ಸೃಷ್ಟಿಗೆ ಕಾರಣವಾದ ಬಂಗಾಳಕೊಲ್ಲಿಯಲ್ಲಿನ ಆಸ್ನಾ ಚಂಡಮಾರುತದ ತೀವ್ರತೆ ಮುಂದಿನ 48 ಗಂಟೆಗಳವರೆಗೂ ಮುಂದುವರೆಯಲಿದೆ. ಸಮುದ್ರ ಮಟ್ಟದಿಂದ 7.6 ಕಿಮೀ ವರೆಗೆ ವಿಸ್ತರಣೆ ಆಗಿದ್ದು ಇದರ ಪ್ರಭಾವದಿಂದ ಕರ್ನಾಟಕ ರಾಜ್ಯದ ಹಲವು ಕಡೆಗಳಲ್ಲಿ ಭಾರೀ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಾಯುಭಾರ ಕುಸಿತು ಪರಿಣಾಮ ಕರ್ನಾಟಕದಲ್ಲಿ ಮುಂದಿನ ಮೂರು ದಿನ ಜೋರು ಮಳೆ ಆಗಲಿದೆ ಒಟ್ಟು ಐದು ದಿನ ಕರಾವಳಿಯ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆನಾಳೆ ಶನಿವಾರ ಸೆಪ್ಟಂಬರ್ 07ರಿಂದ ಮೂರು ದಿನ ಒಳನಾಡಿನಲ್ಲಿ ಮಳೆ ಆರ್ಭಟಿಸಲಿದೆ. ಬೆಳಗಾವಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಎರಡು ದಿನ ಹಾಗೂ ತುಮಕೂರು, ಕಲಬುಗರಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಒಂದು ದಿನ ಜೋರು ಮಳೆ ಆಗಲಿದೆ. ಇದರಿಂದಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *