Breaking News

ಮಹದಾಯಿ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಟೆಂಗಿನಕಾಯಿ

ಹುಬ್ಬಳ್ಳಿ : ಮಹದಾಯಿ ಯೋಜನೆ ಜಾರಿಯಲ್ಲಿ ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತುವ ವಿಚಾರ, ಮಹದಾಯಿ ಯೋಜನೆ ಜಾರಿಯಲ್ಲಿ ಯಾರ ಪಾತ್ರ ಎಷ್ಟು ಇದೆ ಅಂತಾ ಗೊತ್ತು. ಮಹದಾಯಿ ಯೋಜನೆ ವಿಚಾರದಲ್ಲಿ ಒಂದು ಹೆಜ್ಜೆ ಮುಂದು ಹೋಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್.ಡಿ.ಎ ಸರಕಾರ. ಕರ್ನಾಟಕದಲ್ಲಿ ಪ್ರಲ್ಹಾದ್ ಜೋಶಿ ಅವರು ಬಹಳ ಪ್ರಯತ್ನ ಮಾಡಿದ್ದಾರೆ. ಒಂದು ತಾರ್ಕಿಕ ಅಂತ್ಯ ಹಾಡಲು ದಿಟ್ಟ ಹೆಜ್ಜೆ ಇಟ್ಟಿದ್ದಾರೆ.
ಇವತ್ತು ಅರಣ್ಯ ಕ್ಲೀರನ್ಸ್ ಆಗಬೇಕು ಅಷ್ಟೇ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,
ಈ ಹಿಂದೇ ಇದೇ ಕಾಂಗ್ರೆಸ್ ನವರು ಏನು ಹೇಳಿದರು, ಸೋನಿಯಾ ಗಾಂಧಿ ಅವರು ಒಂದು ಹನಿ ನೀರನ್ನ ಬಿಡಲ್ಲ ಎಂದಿದ್ದರು.
ರಾಜ್ಯ ಸರ್ಕಾರ ಯಾವುದೇ ರಾಜಕಾರಣ ಮಾಡಬಾರದು ಕೇಂದ್ರ ಸರ್ಕಾರ ಮಹದಾಯಿ ಬಗ್ಗೆ ಸಾಕಷ್ಟು ಕಾಳಜಿ ವಹಿಸಿದೆ ಎಂದರು.

Share News

About bigtvnews22

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *