Breaking News

ಜಮ್ಮುಮತ್ತುಕಾಶ್ಮೀರ ಚುನಾವಣೆ: ಬಿಜೆಪಿಯಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ಮಾಡಿಕೊಂಡಿವೆ. ಬಿಜೆಪಿ ಕೂಡ ಸಿದ್ಧತೆ ಮಾಡಿಕೊಂಡಿದ್ದು, ಇದೀಗ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಶುಕ್ರವಾರ ನಡೆದ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ಮತ್ತು ಪಕ್ಷದ ಇತರ ಮುಖಂಡರು ಕೂಡ ಹಾಜರಿದ್ದರು. ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ಸಚಿವ ಅಮಿತ್ ಶಾ, ಸ್ವಾತಂತ್ಯ್ರದ ಬಳಿಕ, ಜಮ್ಮು ಮತ್ತು ಕಾಶ್ಮೀರದ ವಿಚಾರ ಬಿಜೆಪಿಗೆ ಮುಖ್ಯವಾಗಿದೆ. ಜಮ್ಮು ಮತ್ತು ಕಾಶ್ಮೀರ ಯಾವತ್ತಿಗೂ ಭಾರತದ ಭಾಗ ಎಂದರು. ಪಂಡಿತ್ ಪ್ರೇಮ್‌ನಾಥ್ ಡೋಗ್ರಾ ಅವರ ಹೋರಾಟದಿಂದ ಶ್ಯಾಮ್‌ ಪ್ರಸಾದ್ ಮುಖರ್ಜಿ ಅವರ ತ್ಯಾಗದವರೆಗೆ ಜಮ್ಮು ಮತ್ತು ಕಾಶ್ಮೀರದ ಹೋರಾಟವನ್ನು ಬಿಜೆಪಿ ಮತ್ತು ಜನಸಂಘ ಮುಂದುವರೆಸಿಕೊಂಡು ಹೋಗಿದೆ. ಜಮ್ಮು ಮತ್ತು ಕಾಶ್ಮೀರ ಯಾವಗಲೂ ಭಾರತದ ಭಾಗವಾಗಿದೆ ಮತ್ತು ಮುಂದೆ ಕೂಡ ಭಾರತದ ಭಾಗವಾಗೇ ಉಳಿಯುತ್ತದೆ ಎಂದು ಹೇಳಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *