Breaking News

ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಚಿರತೆ ಪ್ರತ್ಯಕ್ಷ

ಧಾರವಾಡ : ಧಾರವಾಡದಲ್ಲಿ ಕಾಡಿನಿಂದ ನಾಡಿಗೆ ಆಗಾಗ ಕಾಡು ಪ್ರಾಣಿಗಳು ಬಂದು ಜನರಲ್ಲಿ ಆತಂಕ ಮೂಡಿಸುತ್ತವೆ ಇದೀಗ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಚಿರತೆ ಒಂದು ಓಡಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಹಜವಾಗಿ ಜನರಲ್ಲಿ ಆತಂಕ ಮೂಡಿಸಿದೆ.
ಹೌದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಕರ್ನಾಟಕ ವಿಶ್ವವಿದ್ಯಾಲಯ ಬಳಿಯ ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆಯು, ನಂತರ ಪತ್ರಿಕೋದ್ಯಮ ವಿಭಾಗಕ್ಕೆ ಹೋಗುವ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಕ್ಯಾಂಪಸ್ ನ ಸಿಸಿಟಿವಿ ಕ್ಯಾಮೆರಾದಲ್ಲಿ ಚಿರತೆ ತೆರಳುತ್ತಿರುವ ದೃಶ್ಯ ಇದೀಗ ಸೆರೆಯಾಗಿದೆ. ಇದರಿಂದ ಸಹಜವಾಗಿ ಧಾರವಾಡದ ಜನತೆಗೆ ಆತಂಕ ಹೆಚ್ಚಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *