ಬೆಂಗಳೂರು : ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024 25ನೇ ಸಾಲಿನಿಂದ ಹಾಲಿ ಇರುವ ಕನ್ನಡ ಇತರೆ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಇತರೆ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲು ಘೋಷಿಸಿದ ಹಿನ್ನೆಲೆಯಲ್ಲಿ ಸರ್ಕಾರವು ಉಲ್ಲೇಖ 1ರನ್ವಯ ಮೊದಲನೇ ಹಂತದಲ್ಲಿ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಇತರೆ ಮಾಧ್ಯಮದ ಜೊತೆಯಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲು ಅನುಮತಿಸಿ ಆದೇಶಿಸಿರುತ್ತದೆ. ಅದರಂತೆ ಈಗಾಗಲೇ ರಾಜ್ಯದ್ಯಂತ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿ ಅನುಷ್ಠಾನಗೊಳಿಸಲಾಗಿರುತ್ತದೆ. ಪ್ರಸ್ತುತ ಎರಡನೇ ಹಂತದಲ್ಲಿ ರಾಜ್ಯಾದ್ಯಂತ 373 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸುವ ಸಂಬಂಧ ಉಲ್ಲೇಖ 2 ರನ್ವಯ ಏಕಕಡತದ ಮೂಲಕ ಸರ್ಕಾರದ ಅನುಮೋದನೆ ಕೋರಲಾಗಿರುತ್ತದೆ ಎಂದು ತಿಳಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





