Breaking News

ರಾಜ್ಯದಲ್ಲಿ ಇಂದು 169 ಡೆಂಗ್ಯೂ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ ಹೊತ್ತಲ್ಲೇ ಡೆಂಗ್ಯೂ ಕೇಸ್ ಆರ್ಭಟ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ ರಾಜ್ಯಾದ್ಯಂತ 169 ಡೆಂಗ್ಯೂ ಕೇಸ್ ಪತ್ತೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 82, ಬೆಂಗಳೂರು ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ತಲಾ ಮೂರು, ಕೋಲಾರ, ಶಿವಮೊಗ್ಗ, ವಿಜಯನಗರ ಹಾಗೂ ಕೊಡಗು ಜಿಲ್ಲೆಯಲ್ಲಿ ತಲಾ 2 ಕೇಸ್ ಪತ್ತೆಯಾಗಿರುವುದಾಗಿ ಹೇಳಿದೆ.
ಚಿಕ್ಕಬಳ್ಳಾಪುರ 3, ತುಮಕೂರು 8, ಚಿತ್ರದುರ್ಗ, ದಾವಣಗೆರೆ, ಧಾರವಾಡ ಜಿಲ್ಲೆಯಲ್ಲಿ ತಲಾ 4 ಕೇಸ್ ಪತ್ತೆಯಾದರೇ, ವಿಜಯಪುರ 1, ಗದಗ 5, ಕಲಬುರ್ಗಿ 12, ಮೈಸೂರು 7 ಸೇರಿ ಇತರೆ ಜಿಲ್ಲೆಗಳು ಸೇರಿದಂತೆ 169 ಕೇಸ್ ದೃಢಪಟ್ಟಿದೆ. ಹೀಗಾಗಿ 26,114 ಡೆಂಗ್ಯೂ ಕೇಸ್ ದಾಖಲಾಗಿವೆ, ಇದುವರೆಗೆ 12 ಮಂದಿ ಡೆಂಗ್ಯೂವಿನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣ: ಜಲಾಲ್ ನ ಬಂಧನ !

ಬೆಂಗಳೂರು: ಪುಲಿಕೇಶಿನಗರದ ಜರ್ಮಿಯಾ ರಸ್ತೆಯ ಕಟ್ಟಡವೊಂದರಲ್ಲಿ ಅ.20ರಂದು ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಜಲಾಲ್ (25) ಎಂಬ ಯುವಕನನ್ನು …

Leave a Reply

Your email address will not be published. Required fields are marked *