Breaking News

ವಿಶ್ವ ಪ್ರಜಾಪ್ರಭುತ್ವ ದಿನ: ಜಿಲ್ಲೆಯಲ್ಲಿ ಮಾನವ ಸರಪಳಿ ನಿರ್ಮಾಣ

ಬೆಳಗಾವಿ: ಸೆ.15ರಂದು ಆಚರಿಸಲಾಗುವ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯಲ್ಲಿ 135 ಕಿ.ಮೀ ಉದ್ದದಷ್ಟು ಮಾನವ ಸರಪಣಿ ನಿರ್ಮಿಸಲಾಗುವುದು ಎಂದು ಜಿಲ್ಲಾ ಉಸ್ತುವರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೀದರಿನಿಂದ ಚಾಮರಾಜನಗರ ವರೆಗೆ 2,500 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರಜಾಪ್ರಭುತ್ವ ಮಹತ್ವ ಸಾರಲು ಇದನ್ನು ಯಶಸ್ವಿಗೊಳಿಸಬೇಕು ಎಂದರು.
ಜಿಲ್ಲೆಯ ಎಲ್ಲ ಶಾಲೆ ಕಾಲೇಜು ಮಕ್ಕಳು, ಗ್ರಾಮ ಪಂಚಾಯಿತಿ ಸದಸ್ಯರು, ಇಲಾಖೆಗಳ ಸಿಬ್ಬಂದಿ, ಕಲಾವಿದರು ಸೇರಿದಂತೆ ಎಲ್ಲರನ್ನೂ ಸೇರಿಸಬೇಕು. ಅಂದು ಬೆಳಿಗ್ಗೆ 8.30ರಿಂದ 9.30ರವರೆಗೆ ಒಂದು ತಾಸು ಮಾತ್ರ ಇದನ್ನು ನಡೆಸಲಾಗುವುದು ಎಂದರು.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *