Breaking News

ಕೆಯುಡಿ ಪತ್ರಿಕೋದ್ಯಮ ವಿಭಾಗದ ಹತ್ತಿರ ಪ್ರತ್ಯೇಕ್ಷವಾದ ಚಿರತೆ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯ ಗ್ರಂಥಾಲಯದಿಂದ ಪತ್ರಿಕೋದ್ಯಮ ವಿಭಾಗಕ್ಕೆ ಹೋಗುವ ರಸ್ತೆಯಲ್ಲಿಯೇ ಚಿರತೆ ಪ್ರತ್ಯಕ್ಷವಾಗಿದೆ.

ಕಳೆದ ಕೆಲ ತಿಂಗಳ ಹಿಂದೆ ಚಿರತೆ ಕರ್ನಾಟಕ ವಿಶ್ವವಿದ್ಯಾಲಯ ಆವರಣ ಹಾಗೂ ಮನಸೂರು ಭಾಗದಲ್ಲಿ ಕಾಣಿಸಿಕೊಂಡಿತ್ತು. ಮನಸೂರಿನಲ್ಲಿ ದನ, ಕರುಗಳ ಮೇಲೆ ಚಿರತೆ ದಾಳಿ ಕೂಡ ನಡೆಸಿತ್ತು. ಆದರೆ, ಈ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ವಿಫಲವಾಗಿತ್ತು.

ಈಗ ಕರ್ನಾಟಕ ವಿಶ್ವವಿದ್ಯಾಲಯ ಪತ್ರಿಕೋದ್ಯಮ ವಿಭಾಗಕ್ಕೆ ಹೋಗುವ ರಸ್ತೆಯಲ್ಲೇ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಅದು ರಸ್ತೆ ದಾಟುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದೇ ಸಂದರ್ಭದಲ್ಲಿ ಸಿಬ್ಬಂದಿಯೊಬ್ಬರು ಬೈಕ್ ತೆಗೆದುಕೊಂಡು ಅದೇ ರಸ್ತೆಯಲ್ಲಿ ಹೋಗುತ್ತಿದ್ದ ದೃಶ್ಯ ಕೂಡ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಳೆದ ಆರು ತಿಂಗಳ ಹಿಂದೆ ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲೇ ಚಿರತೆ ಪ್ರತ್ಯಕ್ಷವಾಗಿ ಭಯದ ವಾತಾವರಣ ಸೃಷ್ಟಿಸಿತ್ತು. ಈಗ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗಿದೆ.

Share News

About bigtvnews22

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *