Breaking News

ಕಲಬುರಗಿಯಲ್ಲಿ ಹನಿಟ್ರ್ಯಾಪ್ ಪ್ರಕರಣ: 8 ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: ಪೊಲೀಸರು, ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನೇ ಟಾರ್ಗೆಟ್ ಮಾಡಿ ಹನಿ ಟ್ರ್ಯಾಪ್ ಖೆಡ್ಡಾಗೆ ಕೆಡವುತ್ತಿದ್ದ ಗುಂಪಿನ ವಿರುದ್ಧ ಕಲಬುರ್ಗಿಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ದಲಿತ ಸೇನೆಯ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ, ಶ್ರೀಕಾಂತ್ ರೆಡ್ಡಿ, ಮಂಜು ಭಂಡಾರಿ ಸೇರಿದತೆ 8 ಜನರ ವಿರುದ್ಧ ಹನಿಟ್ರ್ಯಾಪ್ ಆರೋಪದಲ್ಲಿ ಪ್ರಕರಣ ದಾಖಲಾಗಿದೆ, ಸಾಮಾಜಿಕ ಜಾಲತಾಣಗಳ ಮೂಲಕ ಯುವತಿಯರನ್ನು ಪರಿಚಿಸಿಕೊಂಡು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಯುವತಿಯರಿಗೆ ಹಣದ ಆಮಿಷವೊಡ್ಡಿ, ಬಳಿಕ ಯುವತಿಯರನ್ನು ಹನಿಟ್ರ್ಯಾಪ್ ಗೆ ಬಳಸಿಕೊಳ್ಳುತ್ತಿದ್ದರು. ಹತ್ತಕ್ಕೂ ಹೆಚ್ಚು ಯುವತಿಯರನ್ನು ಈ ರೀತಿ ಬಳಸಿಕೊಂಡಿದ್ದಾರೆ ಎನ್ನಲಾಗಿದೆ.
ದೊಡ್ಡದೊಡ್ಡ ಉದ್ಯಮಿಗಳು, ಸರ್ಕಾರಿ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಂಡು ಫೋಟೊ, ವಿಡಿಯೋ ರೆಕಾರ್ಡ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಇದೇ ರೀತಿ ಆರೋಪಿಗಳು ಕಮಲಾಪುರ ಪೊಲೀಸ್ ಠಾಣೆಯ ಪೇದೆಯನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ, ಬ್ಲ್ಯಾಕ್ ಮೇಲ್ ಮಾಡಿ 7 ಲಕ್ಷ ರೂಪಾಯಿ ಹಣ ವಸೂಲಿ ಮಾಡಿದ್ದರು. ಇದೇ ರೀತಿ ಉದ್ಯಮಿಯೊಬ್ಬರಿಂದ 40 ಲಕ್ಷ ರೂಪಾಯಿ ವಸೂಲಿ ಮಾಡಿದ್ದಾರೆ. ಆರೋಪಿಗಳು ಓರ್ವ ಯುವತಿಗೆ ಗರ್ಭಪಾತವನ್ನೂ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದೀಗ 8 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *