Breaking News

ಹರಿಯಾಣ ಚುನಾವಣೆ: ಜುಲಾನಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ವಿನೇಶ್ ಫೋಗಟ್ ಗೆ ಟಿಕೆಟ್

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಗೆ 32 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆಗೊಳಿಸಿದೆ.
ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಗಡಿ ಸಂಪ್ಲಾ ಕಿಲೋಯ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನ್ ಅವರನ್ನು ಹೊಡಲ್ ಹಾಗೂ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಜುಲಾನಾ ಕ್ಷೇತ್ರದಿಂದ ಉಮೇದುವಾರರನ್ನಾಗಿ ಮಾಡಿದೆ, ದೆಹಲಿಯಲ್ಲಿ ನಡೆದ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲಾಯಿತು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕಿ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌, ಹರಿಯಾಣ ಕಾಂಗ್ರೆಸ್ ಉಸ್ತುವಾರಿ ದೀಪಕ್ ಬಬಾರಿಯಾ, ದೀಪಿಂದರ್ ಸಿಂಗ್ ಹೂಡ ಸಭೆಯಲ್ಲಿ ಭಾಗಿಯಾಗಿದ್ದರು, 32 ಮಂದಿಯ ಪೈಕಿ 28 ಹಾಲಿ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ವಿನೇಶ್ ಫೋಗಟ್ ಸೇರಿ ಐವರು ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *