Breaking News

ಮ್ಯಾನ್ಮಾರ್ ನಲ್ಲಿ ವೈಮಾನಿಕ ದಾಳಿ: 11 ನಾಗರಿಕರು ಸಾವು

ಯಾಂಗಾನ್ : ಉತ್ತರದ ಶಾನ್ ರಾಜ್ಯದಲ್ಲಿ ಮ್ಯಾನ್ಯಾರ್ ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ 11 ನಾಗರಿಕರು ಸಾವನ್ನಪ್ಪಿದ್ದು ಇತರ 11 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.
ಶಾನ್ ರಾಜ್ಯದ ನಮ್ಕಾಮ್ ನಗರದ ಎರಡು ಪ್ರದೇಶಗಳ ಮೇಲೆ ಸೇನೆಯ ವಿಮಾನಗಳು ಬಾಂಬ್ ದಾಳಿ ನಡೆಸಿವೆ ಎಂದು ಸೇನಾಡಳಿತದ ವಿರುದ್ಧ ಹೋರಾಡುತ್ತಿರುವ ಜನಾಂಗೀಯ ಅಲ್ಪಸಂಖ್ಯಾತ ಸಶಸ್ತ್ರ ಹೋರಾಟಗಾರರ ಗುಂಪು ತಾಂಗ್ ನ್ಯಾಷನಲ್ ಲಿಬರೇಷನ್ ಆರ್ಮಿ ವಕ್ತಾರೆ ಲಾಯ್ ಯಾಯ್ ಊವ್ ಹೇಳಿದ್ದಾರೆ. ಬಾಂಬ್ ದಾಳಿಯಲ್ಲಿ 4 ಮಹಿಳೆಯರು, ಇಬ್ಬರು ಮಕ್ಕಳ ಸಹಿತ 11 ಮಂದಿ ಸಾವನ್ನಪ್ಪಿದ್ದು 11 ಮಂದಿ ಗಾಯಗೊಂಡಿದ್ದಾರೆ, ಸ್ಥಳೀಯ ರಾಜಕೀಯ ಪಕ್ಷದ ಕಚೇರಿಗೆ ಹಾನಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *