ಲಖನೌ: ಧಾರ್ಮಿಕ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಬಸ್ ಹಾಗೂ ಟೆಂಪೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17 ಮಂದಿ ಮೃತಪಟ್ಟು, 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಹತ್ರಾಸ್ನ ರಾಷ್ಟ್ರೀಯ ಹೆದ್ದಾರಿ 93ರಲ್ಲಿ ನಡೆದಿದೆ.
ಈ ಕುರಿತು ಮಾತನಾಡಿರುವ ಅಲಿಘರ್ ಇನ್ಸ್‌ಪೆಕ್ಟರ್ ಜನರಲ್ ಶಲಭ್ ಮಾಥುರ್, ಶುಕ್ರವಾರ ಸಂಜೆ 6:45ರ ಸುಮಾರಿಗೆ ಅಪಘಾತ ಸಂಭಭವಿಸಿದ್ದು, ಸಾರಿಗೆ ನಿಗಮದ ಬಸ್ ಓವರ್ಟೇಕ್ ಮಾಡಲು ಮುಂದಾದಾಗ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಹತ್ರಾಸ್ ಜಿಲ್ಲೆಯ ಚಂದ್ಪಾ ಪೊಲೀಸ್ ಠಾಣೆ ವ್ಯಾಪ್ತಿಯ ಮೆಟೈ ಗ್ರಾಮದ ಬಳಿ ನಡೆದಿದ್ದು, 17 ಮಂದಿ ಮೃತಪಟ್ಟಿದ್ದಾರೆ. 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ 08 ಜನರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಅಪಘಾತಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದು, ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಟ್ವೀಟ್ ಮಾಡಿದ್ದಾರೆ. ಘಟನೆ ಸಂಬಂಧಿಸಿದಂತೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಗಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಘೋಷಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

