Breaking News

ಗೌರಿ ಗಣೇಶ ಹಬ್ಬದ ಶುಭಾಶಯ ತಿಳಿಸಿದ ಪೊಲೀಸ್ ಕಮಿಷನ‌ರ್

ಹುಬ್ಬಳ್ಳಿ: ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯ ತಿಳಿಸಿದ ಪೊಲೀಸ್ ಕಮಿಷನ‌ರ್ ಎನ್. ಶಶಿಕುಮಾ‌ರ್, ಹುಬ್ಬಳ್ಳಿ – ಧಾರವಾಡ ಅವಳಿನಗರದ ಒಂದು ಸಾವಿರ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಪರವಾನಿಗೆ ನೀಡಲಾಗಿದೆ. ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಶಾಂತಿ – ಸುವ್ಯವಸ್ಥೆಗೆ ಧಕ್ಕೆ ಬರದಂತೆ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.

ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಗಣೇಶೋತ್ಸವಕ್ಕೆ ಶಾಂತಿ ಸಭೆಗೆ, ಸರ್ವ – ಧರ್ಮಗಳ ಪ್ರಮುಖರ ಸಭೆ ಕರೆಯಲಾಗಿತ್ತು. ಯಾವುದೇ ರೀತಿಯ ಕಾನೂನು ಸುವ್ಯವಸ್ಥೆ ಹಾಳಗದಂತೆ ಕ್ರಮ ಕೈಗೊಳ್ಳಲಾಗಿದೆ. ಶಾಂತಿ ಸುವ್ಯವಸ್ಥೆಯಿಂದ ಗಣೇಶೋತ್ಸವಕ್ಕೆ ಮನವಿ ಮಾಡಲಾಗಿದೆ. ಪಾಲಿಕೆ ವತಿಯಿಂದ, ಈದ್ದಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮೂರು ದಿನಗಳ ಕಾಲ ಅನುಮತಿ ಕೊಡಲಾಗಿದೆ.

ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಈದ್ಗಾ ಮೈದಾನ ಸುತ್ತ ಮುತ್ತ ಸಿಸಿಟಿವಿ ಅಳವಡಿಸಲಾಗಿದೆ. ಹೆಚ್ಚಿನ ಪೊಲೀಸ್‌ ಭದ್ರತೆ ನಿಯೋಜನೆ ಮಾಡಲಾಗಿದೆ. ಉತ್ಸವ ಮಂಡಳಿ ಗಣೇಶ ಆಚರಣೆಗೆ ಶಾಂತಿಯಿಂದ ಆಚರಣೆಗೆ ಹೇಳಿದ್ದಾರೆ. ಬಂದೋಬಸ್ತ್ಗಾಗಿ ಸಿಆ‌ರ್, ಡಿ.ಆ‌ರ್, ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮೀಷನರೇಟ್ ಸಿಬ್ಬಂದಿ ನಿಯೋಜನೆ ಮಾಡಿದೆ.

ಹುಬ್ಬಳ್ಳಿಯಲ್ಲಿ 11 ದಿನಗಳ ಕಾಲ ಸಾರ್ವಜನಿಕರು ಶಾಂತಿಯಿಂದ ಹಬ್ಬ ಆಚರಿಸಬೇಕಾಗಿದೆ. ಹುಬ್ಬಳ್ಳಿ – ಧಾರವಾಡ ಅವಳಿನಗದರಲ್ಲಿ ದೊಡ್ಡ ದೊಡ್ಡ ಗಣಪತಿ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಹುಬ್ಬಳ್ಳಿ – ಧಾರವಾಡ ಸೇರಿದಂತೆ ಉತ್ತರ ಕರ್ನಾಟಕ ಭಾಗದಿಂದ ಜನರು ಹುಬ್ಬಳ್ಳಿಗೆ ಬರುತ್ತಾರೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.

Share News

About Shaikh BigTv

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *