ಬೆಂಗಳೂರು: ರಾಜ್ಯದಲ್ಲಿ ಸೆ.15 ಅಥವಾ 20ರ ನಂತರ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆ ವಾರವಿಡೀ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣು ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿ, 6 ದಿನ ಹಾಲು, ರಾಗಿ ಮಾಲ್ಟ್, ಬಿಸಿಯೂಟ ಸಿಗುತ್ತಿದೆ ವಾರದಲ್ಲಿ ಒಂದು ದಿನ ಸಿಗುತ್ತಿರುವ ಮೊಟ್ಟೆಯನ್ನು 2 ದಿನ ನೀಡಲಾಗುತ್ತಿದೆ. ಅಜೀಂ ಪ್ರೇಮ್‌ಜೀ ಪ್ರತಿಷ್ಠಾನ ಜತೆ ಮಾಡಿಕೊಂಡಿರುವ ಒಪ್ಪಂದ ಪ್ರಕಾರ, 1,500 ಕೋಟಿ ರೂ. ವೆಚ್ಚದಲ್ಲಿ 56 ಲಕ್ಷ ಮಕ್ಕಳಿಗೆ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣು ನೀಡುವ ಕಾರ್ಯ ಶುರುವಾಗಲಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

