ಕಲಬುರಗಿ: 10 ವರ್ಷಗಳ ನಂತರ ತೊಗರಿ ನಾಡು ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಗೆ ಮುಹೂರ್ತ ನಿಗದಿಯಾಗಿದೆ.
ಸೆ.17ರ ಸಂಜೆ 4 ಗಂಟೆಗೆ ಕಲಬುರಗಿ ನಗರದ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸಂಪುಟ ಸಭೆ ನಿಗದಿಗೊಳಿಸಲಾಗಿದೆ. ಕಲಬುರಗಿಯಲ್ಲಿ ಪ್ರಸಕ್ತ ಸಾಲಿನ 19ನೇ ಸಚಿವ ಸಂಪುಟ ಸಭೆ ಎಂಬುದಾಗಿ ಸಚಿವ ಸಂಪುಟದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ ಅಧಿಸೂಚನೆ ಹೊರಡಿಸಿದ್ದಾರೆ.
ಮುಖ್ಯಮಂತ್ರಿಗಳು ಸೆ.17ರಂದು ಬೆಳಗ್ಗೆ 9 ಗಂಟೆಗೆ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಸಂಪುಟದ ಎದುರು ಕಳುಹಿಸಬಹುದಾದ ವಿಷಯಗಳನ್ನು ಮುಂದಿನ 5 ದಿನದೊಳಗೆ ಆಯಾ ಇಲಾಖೆಗಳು ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

