Breaking News

ಐತಿಹಾಸಿಕ ಕೋಟೆ ನಾಡಿನಲ್ಲಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ

ಚಿತ್ರದುರ್ಗ: ಇಂದು ದೇಶಾದ್ಯಂತ ಗಣೇಶ ಚತುರ್ಥಿ ಹಿನ್ನೆಲೆ ಮನೆ ಮನೆಗಳಲ್ಲಿ ಸಂಭ್ರಮ ಮನೆ ಮಾಡಿದೆ. ಇತ್ತ ಐತಿಹಾಸಿಕ ಕೋಟೆ ನಾಡು ಚಿತ್ರದುರ್ಗದಲ್ಲೂ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.
ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ನಗರದ ಬಿ ಡಿ ರಸ್ತೆಯಲ್ಲಿನ ಜೈನಧಾಮದಲ್ಲಿ ಬೃಹತ್ ಪೆಂಡಾಲ್ ಹಾಕಿ ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು ಇಂದಿನಿಂದ 21 ದಿನಗಳ ಕಾಲ ವಿವಿಧ ಪೂಜಾ ಕಾರ್ಯಕ್ರಮಗಳು ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಗಣಪತಿಗೆ ಪ್ರಥಮವಾಗಿ ಒಂದು ಗ್ರಾಂ ಬಂಗಾರದ ಆಭರಣಗಳನ್ನು ತಯಾರು ಮಾಡಿ, ಗಣೇಶನಿಗೆ ತೋಡಿಸಲಾಗಿದೆ.
ಕಳೆದ ನಾಲ್ಕು ವರ್ಷಗಳಿಂದ ಗಣಪತಿ ಪೂರ್ವ ದಿಕ್ಕಿನಲ್ಲಿ ನಿರ್ಮಾಣ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಉತ್ತರ ದಿಕ್ಕಿಗೆ ಮಂಟಪವನ್ನು ನಿರ್ಮಾಣ ಮಾಡಿ ಉತ್ತರ ದಿಕ್ಕಿಗೆ ಈ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ನಗರದ ನೂರಾರು ಭಕ್ತರು ಶ್ರೀ ಗಣೇಶನ ಪೂಜೆಯಲ್ಲಿ ಭಾಗಿಯಾಗಿ ದರ್ಶನ ಪಡೆದರು.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *