ನವದಹೆಲಿ : ಬೂದಿ ಮುಚ್ಚಿದ ಕೆಂಡದಂತಿರುವ ಮಣಿಪುರದಲ್ಲಿ ಗಣೇಶ ಹಬ್ಬದ ದಿನವೇ ಹಿಂಸಾಚಾರ ನಡೆದಿದೆ. ಜಿರಿಬಾಮ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದ ಹಿಂಸಾಚಾರದಲ್ಲಿ ಒಟ್ಟು ಐವರು ಮೃತಪಟ್ಟಿದ್ದು, ಓರ್ವನಿಗೆ ಶಂಕಿತ ಉಗ್ರರು ಗುಂಡು ಹಾರಿಸಿ ಕೊಂದು ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಗುಂಡಿನ ಚಕಮಕಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಿನ್ನೆಯಷ್ಟೇ ಇಂಫಾಲ್ ಜಿಲ್ಲೆಯಲ್ಲಿ ಸಿಎಂ ಬಿರೇನ್ ಸಿಂಗ್ ಮನೆ ಮೇಲೆ ಶಂಕಿತ ಉಗ್ರರು ದಾಳಿ ನಡೆಸಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದ ಇದಾದ ಮರುದಿನವೇ ಈ ವಿಧ್ವಂಸಕ ಕೃತ್ಯ ಮರುಕಳಿಸಿದೆ.
ಈ ಹಿನ್ನೆಲೆಯಲ್ಲಿ ಸಿಎಂ ತುರ್ತಾಗಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಮುಂದಾಗಿದ್ದಾರೆ. ಇಂಫಾಲ್ ಕಣಿವೆ ಮತ್ತು ಸಮೀಪದ ಬೆಟ್ಟಗಳಲ್ಲಿ ಜನಾಂಗೀಯ ಹಿಂಸಾಚಾರದಿಂದ ಕಳೆದ ಜೂನ್‌ನಲ್ಲಿ ಒಂದು ಸಮುದಾಯಕ್ಕೆ ಸೇರಿದ 59 ವರ್ಷದ ವ್ಯಕ್ತಿಯನ್ನು ಇನ್ನೊಂದು ಸಮುದಾಯದ ಉಗ್ರಗಾಮಿಗಳು ಹತ್ಯೆಗೈದ್ದರಿಂದ ಇಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

