ಪ್ಯಾರಿಸ್: ಟೋಕಿಯೋ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತೀಯರು 19 ಪದಕಗಳನ್ನು ಗೆದ್ದಿದ್ದೇ ಶ್ರೇಷ್ಠ ಸಾಧನೆಯಾಗಿತ್ತು. ಆದರೆ ಈ ಬಾರಿ 26 ಪದಕಗಳನ್ನು ಗೆಲ್ಲುವ ಮೂಲಕ ಭಾರತೀಯ ಕ್ರೀಡಾಪಟುಗಳು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಪದಕಗಳ ಸಂಖ್ಯೆ 30ರ ಗಡಿದಾಟುವ ನಿರೀಕ್ಷೆಯಿದೆ.
ಪ್ಯಾರಿಸ್ನಲ್ಲಿ ನಡೆಯುತ್ತಿರುವ ಪ್ಯಾರಾಲಂಪಿಕ್ಸ್ 2024 ರ ಪುರುಷರ ಶಾಟ್ ಪುಟ್ ಎಫ್57 ಸ್ಪರ್ಧೆಯಲ್ಲಿ ಭಾರತದ ಹೊಕಾಟೊ ಹೊಟೊಝೆ ಸೆಮಾ ಕಂಚಿನ ಪದಕವನ್ನು ಗೆದ್ದಿದ್ದಾರೆ. ಸ್ಟೇಡ್ ಡಿ ಫ್ರಾನ್ಸ್ ಮೈದಾನದಲ್ಲಿ ನಡೆದ ಫೈನಲ್ ಸುತ್ತಿನಲ್ಲಿ 14.65 ಮೀಟರ್ ದೂರಕ್ಕೆ ಎಸೆಯುವ ಮೂಲಕ ಹೊಕಾಟೊ ಮೂರನೇ ಸ್ಥಾನ ಪಡೆದರು. ಈ ಮೂಲಕ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತಕ್ಕೆ 27ನೇ ಪದಕ ಗೆದ್ದುಕೊಟ್ಟರು.
bigtvnews | Hubli Dharwad News | Kannada News | Karnataka News Hubli News | News In Hubli | Local news

