Breaking News

ತೀವ್ರ ಬರಗಾಲದಿಂದ ತತ್ತರಿಸಿದ ಮಲಾವಿ: 1000 ಮೆಟ್ರಿಕ್ ಟನ್ ಅಕ್ಕಿ ರವಾನಿಸಿದ ಭಾರತ

ನವದೆಹಲಿ: ತೀವ್ರ ಬರಪೀಡಿತ ಮಲಾವಿಗೆ ಮಾನವೀಯ ನೆರವಿನ ಭಾಗವಾಗಿ ಭಾರತವು 1,000 ಮೆಟ್ರಿಕ್ ಟನ್ ಅಕ್ಕಿಯನ್ನು ರವಾನಿಸಿದೆ ಎಂದು ವರದಿಯಾಗಿದೆ.
ಪೂರ್ವ ಆಫ್ರಿಕಾದ ಕೆಲವು ಭಾಗಗಳಲ್ಲಿ ಪ್ರವಾಹ ಮತ್ತು ಮಳೆ ಕೊರತೆ ಎದುರಾಗಿದ್ದು, ವಿಶೇಷವಾಗಿ ಮಲಾವಿ ತೀವ್ರ ಬರಗಾಲದಿಂದ ತತ್ತರಿಸಿದೆ ಇದರಿಂದಾಗಿ ಆಹಾರ ಉತ್ಪಾದನೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ.
ಭಾರತವು ಮಾನವೀಯ ನೆರವು ಒದಗಿಸುವ ಮೂಲಕ ಮಲಾವಿಯ ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುವ ಸಂದೇಶವನ್ನು ರವಾನಿಸಿದೆ. ಎಲ್‌ ನಿನೊ ವಿದ್ಯಮಾನದಿಂದ ಉಂಟಾದ ಭೀಕರ ಬರಗಾಲದ ಪರಿಣಾಮಗಳನ್ನು ಪರಿಹರಿಸಲು 1,000 ಮೆಟ್ರಿಕ್ ಟನ್ ಅಕ್ಕಿ ಸೇರಿದಂತೆ ಇತರೆ ಅಗತ್ಯ ವಸ್ತುಗಳನ್ನು ಇಂದು ಮಲಾವಿಗೆ ತಲುಪಿಸಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಎಕ್ಸ್ ನಲ್ಲಿ ಮಾಹಿತಿ ನೀಡಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *