Breaking News

ಲಂಚಕ್ಕೆ ಬೇಡಿಕೆ: ಮೂವರ ಅಧಿಕಾರಿಗಳ ಬಂಧನ

ಮುಂಬೈ: ₹60 ಲಕ್ಷ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಸರಕು ಮತ್ತು ಸೇವಾ ತೆರಿಗೆ ಇಲಾಖೆಯ ಸೂಪರಿಂಟೆಂಡೆಂಟ್ ಸೇರಿದಂತೆ ಮೂವರು ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತರನ್ನು ಸೂಪರಿಂಟೆಂಡೆಂಟ್ ಸಚಿನ್ ಗೋಕುಲ್ಕಾ, ಚಾರ್ಟರ್ಡ್ ಅಕೌಂಟೆಂಟ್ ರಾಜ್ ಅಗರ್ವಾಲ್ ಮತ್ತು ಅಭಿಷೇಕ್ ಮೆಹ್ತಾ ಎಂದು ಗುರುತಿಸಲಾಗಿದೆ.
ಉದ್ಯಮಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳು ಮೊದಲಿಗೆ ದೂರುದಾರರ ಬಳಿ ₹80 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ನಂತರ ₹60 ಲಕ್ಷಕ್ಕೆ ಒಪ್ಪಿಕೊಂಡಿದ್ದರು ಎಂದು ತಿಳಿದುಬಂದಿದೆ.
ಚಾರ್ಟರ್ಡ್ ಅಕೌಂಟೆಂಟ್ ರಾಜ್ ಅಗರ್‌ವಾಲ್ ಅವರು ದೂರುದಾರರ ಸಂಬಂಧಿಯೊಬ್ಬರ ಬಳಿ ₹20 ಲಕ್ಷ ಲಂಚ ಸ್ವೀಕರಿಸುತ್ತಿರುವಾಗ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *