Breaking News

ಕಲಬುರಗಿಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಕಲಬುರಗಿ: ಮಾರಕಾಸ್ತ್ರಗಳಿಂದ ಹೊಡೆದು ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಕೆಸರಟಗಿ ಗ್ರಾಮದ ಬಳಿ ನಡೆದಿದೆ. ಕಪಿಲ್ ಗಾಯಕ್ವಾಡ್ (37) ಕೊಲೆಯಾದ ವ್ಯಕ್ತಿ. ಕಪಿಲ್ ಗಾಯಕ್ವಾಡ್ ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಕೆಸರಟಗಿಗೆ ಹೋಗುತ್ತಿದ್ದರು. ಮಾರ್ಗ ಮಧ್ಯೆ, ಕೆಸರಟಗಿ ಬಳಿಯ ರೈಲ್ವೆ ಅಂಡರ್ ಬ್ರೀಡ್ಜ್ ಬಳಿ ಕಪಿಲ್​ ಗಾಯಕ್ವಾಡ್​ ಅವರನ್ನು ಅಡ್ಡಗಟ್ಟಿ ಪತ್ನಿಯ ಮುಂದೆ ಹತ್ಯೆ ಮಾಡಲಾಗಿದೆ.
ಕೊಲೆ ಹಿಂದೆ ಕಪಿಲ್ ಗಾಯಕ್ವಾಡ್ ಪತ್ನಿ ಭಾಗ್ಯ ಕೈವಾಡವಿದೆ ಎಂದು ಮೃತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕುಟುಂಬಸ್ಥರು ಆಗ್ತಹಿಸಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *