Breaking News

ವಿದ್ಯುತ್ ಕಂಬ ಸ್ಪರ್ಶದಿಂದ ವ್ಯಕ್ತಿ ಸಾವು

ಕಲಬುರಗಿ: ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದ ಎದುರಿನ ನ್ಯೂ ಲೈಫ್ ಆಸ್ಪತ್ರೆಯ ಹೈಲೈಟ್ ಬೋರ್ಡ್ ಗಾಗಿ ಹಾಕಿದ್ದ ಕಂಬದಲ್ಲಿ ಪ್ರವಹಿಸುತ್ತಿದ್ದ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಶಹಾಪುರ ಪಟ್ಟಣದ ಬಿ.ಬಿ.ರೋಡ್ ನಿವಾಸಿ ಮುಹಮ್ಮದ್ ಇರ್ಶಾದ್ ಮೃತಪಟ್ಟವರು. ಇವರು ತನ್ನ ಗರ್ಭಿಣಿ ಸಹೋದರಿಗೆ ಚಿಕಿತ್ಸೆಗೆಂದು ಶನಿವಾರ ಶಹಾಪುರದಿಂದ ಕಲಬುರಗಿ ನಗರದ ನ್ಯೂ ಲೈಫ್ ಆಸ್ಪತ್ರೆಗೆ ಕರೆತಂದಿದ್ದರು.
ಈ ವೇಳೆಯಲ್ಲಿ ಆಸ್ಪತ್ರೆ ಆವರಣದಲ್ಲಿರುವ ಹೈಲೈಟ್ ಬೋರ್ಡ್ ಕಂಬವನ್ನು ಸ್ಪರ್ಶಿಸಿದಾಗ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟಿರುವುದಾಗಿ ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆಯ ಆಡಳಿತ ವ್ಯವಸ್ಥೆ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *