Breaking News

ಮಹದಾಯಿ ಯೋಜನೆಗೆ ಕಾಂಗ್ರೆಸ್ ನವರಿಂದಲೇ ಹಿನ್ನಡೆ: ಬಸವರಾಜ ಬೊಮ್ಮಾಯಿ

ಹಾವೇರಿ: ಮಹದಾಯಿ ಯೋಜನೆಗೆ ಕಾಂಗ್ರೆಸ್ ನವರಿಂದಲೇ ಹಿನ್ನಡೆಯಾಗಿದ್ದು, ಕರ್ನಾಟಕಕ್ಕೆ ಮಹದಾಯಿಯ ಹನಿ ನೀರನ್ನು ಕೊಡುವುದಿಲ್ಲ ಎಂದು 2009ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದರು. ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಹಾದಾಯಿ ವಿಚಾರವಾಗಿ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವುದಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಹದಾಯಿ ಯೋಜನೆಗೆ ಹಿನ್ನಡೆ ಮಾಡಿದ್ದರೆ ಅದು ಕಾಂಗ್ರೆಸ್. ಮಹದಾಯಿ ಹನಿ ನೀರನ್ನು ರಾಜ್ಯಕ್ಕೆ ಕೊಡುವುದಿಲ್ಲ ಎಂದು ಹಿಂದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದರು. ಟ್ರಿಬ್ಯುನಲ್ ಅಧ್ಯಕ್ಷರಿಗೆ ನಾಲ್ಕೈದು ವರ್ಷ ಒಂದು ಆಫೀಸ್ ಕೂಡಾ ಕೊಡಲಿಲ್ಲ, ವಿಳಂಬ ಮಾಡಿದರು. ಟ್ರಿಬ್ಯುನಲ್ ನಲ್ಲಿ ತಾವೇ ಬರೆದು ಕೊಟ್ಟು, ನಾವು ನಿರ್ಮಿಸಿದ ಇಂಟಲ್ ಲಿಂಕಿಂಗ್ ಕೆನಾಲ್ ಗೆ ಗೋಡೆ ಕಟ್ಟಿದರು ಇದೆಲ್ಲಾ ಇತಿಹಾಸದಲ್ಲಿದೆ ಎಂದು ಹೇಳಿದರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *