Breaking News

ಪಾಕಿಸ್ತಾನದ ಕಡಲ ತೀರದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದ ಬೃಹತ್‌ ಸಂಗ್ರಹ ಪತ್ತೆ

ಇಸ್ಲಾಮಾಬಾದ್‌: ಪಾಕಿಸ್ತಾನದ ಕಡ ತೀರದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದ ಬೃಹತ್‌ ಸಂಗ್ರಹ ಪತ್ತೆಯಾಗಿದ್ದು, ಇದು ಆರ್ಥಿಕವಾಗಿ ತತ್ತರಿಸಿದರುವ ಆ ದೇಶಕ್ಕೆ ಚೇತರಿಕೆ ನೀಡಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ತೈಲ ಮತ್ತು ಅನಿಲ ನಿಕ್ಷೇಪಗಳ ಉಪಸ್ಥಿತಿಯನ್ನು ಪರಿಶೀಲಿಸಲು ಮೂರು ವರ್ಷಗಳಿಂದ ಸಮೀಕ್ಷೆಯನ್ನು ಕೈಗೊಳ್ಳಲಾಯಿತು. ಈ ವೇಳೆ ವಿಶ್ವದ 4ನೇ ಅತೀದೊಡ್ಡ ತೈಲ ನಿಕ್ಷೇಪ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈಗಲೇ ಈ ಸಂಗ್ರವನ್ನು ಬಳಸಿಕೊಳ್ಳಲು ಸಾಧ್ಯವಿಲ್ಲ ತೈಲ ಹೊರ ತೆಗೆಯುವ ಕಾಮಗಾರಿ ಕೈಗೆತ್ತಿಕೊಂಡು ಪೂರ್ಣಗೊಳಿಸಲು ಹಲವು ವರ್ಷಗಳೇ ಬೇಕಾಗಬಹುದು ಎಂದು ತಜ್ಞರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅಧಿಕಾರಿಯೊಬ್ಬರು, ಇದನ್ನು ಹೊರ ತೆಗೆಯಲು ಅಪಾರ ಪ್ರಮಾಣದ ಹೂಡಿಕೆ ಅಗತ್ಯ. ಅಂದಾಜು 5 ಬಿಲಿಯನ್‌ ಅಮೆರಿಕನ್‌ ಡಾಲರ್‌ ಬೇಕಾಬಹುದು. ಅಲ್ಲದೆ ತೈಲ ಹೊರತೆಗೆಯಲು ಕನಿಷ್ಠ 5 ವರ್ಷವಾದರೂ ಬೇಕಾಗಬಹುದು ಎಂದು ಹೇಳಿದ್ದಾರೆ.
ಸರ್ಕಾರ ಇತ್ತ ಗಮನ ಹರಿಸಿ ಶೀಘ್ರದಲ್ಲಿಯೇ ಕ್ರಮ ಕೈಗೊಂಡರೆ ದೇಶದ ಆರ್ಥಿಕ ಸ್ಥಿತಿ ಸುಧಾರಿಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *