Breaking News

ಸಿಲಿಂಡ‌ರ್ ಸ್ಫೋಟ:ನಾಲ್ವರು ಗಂಭೀರ ಗಾಯ

ಕುಂದಗೋಳ: ಸಿಲಿಂಡ‌ರ್ ಸ್ಫೋಟಗೊಂಡು ನಾಲ್ವರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ರೊಟ್ಟಿಗವಾಡ ಗ್ರಾಮದಲ್ಲಿ ಇಂದು ನಡೆದಿದೆ.

ರೊಟ್ಟಿಗವಾಡ ಗ್ರಾಮದ ಸಿದ್ದಲಿಂಗಯ್ಯ ಹಿರೇಮಠ ಎಂಬುವರ ಮನೆಯಲ್ಲಿ ಸಿಲಿಂಡ‌ರ್ ಸ್ಫೋಟಗೊಂಡಿದೆ. ಈ ವೇಳೆ ಸಿದ್ದಲಿಂಗಯ್ಯ ಹಿರೇಮಠ (43), ಪತ್ನಿ ವಿಶಾಲ ಹಿರೇಮಠ (35), ಹಿರಿ ಮಗ ಶ್ರೀಪಾದಯ್ಯ ಹಿರೇಮಠ (17), ಸಿದ್ದಲಿಂಗಯ್ಯ ಅವರ ತಮ್ಮನ ಹೆಂಡತಿ ನಿರ್ಮಲಾ ಹಿರೇಮಠ ಎಂಬುವರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸಿಲಿಂಡ‌ರ್ ಸ್ಫೋಟಗೊಂಡು ಅಡುಗೆಮನೆಯಲ್ಲಿ ಇದ್ದ ಇಬ್ಬರು ಸೇರಿದಂತೆ ಬಾಥ್ ರೂಮ್ ಒಳಗೆ ಇದ್ದವರಿಗೂ ಗಂಭೀರ ಗಾಯಗಳಾಗಿದ್ದು, ಮನೆಗೆ ಹಾನಿಯಾಗಿದೆ.

ಸ್ಥಳಕ್ಕೆ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಇಮ್ರಾನ್ ಪಠಾಣ್ ಬೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

Share News

About Shaikh BigTv

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *