Breaking News

ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಬೆಳಗಾವಿ: ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ ಜೋರಾಗಿದೆ. ಕರ್ನಾಟಕದಲ್ಲಿಯೂ ಹಲವು ಕಡೆ ಗಣೇಶೋತ್ಸವ ಆಚರಣೆ ಮಾಡುವ ಸಮಿತಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿವೆ, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಬೆಳಗಾವಿಯಲ್ಲಿಯೂ ಗಣೇಶ ಹಬ್ಬದ ಸಂಭ್ರಮ ಜೋರಾಗಿದೆ.
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಡಿಸಿ ಮೊಹಮ್ಮದ್ ರೋಷನ್ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ. ಕಛೇರಿಯಲ್ಲಿ ಪರಿಸರ ಸ್ನೇಹಿಯಾದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದರು. ಇದಕ್ಕೂ ಮೊದಲು ಅವರು ಗಣೇಶ ಮೂರ್ತಿಗೆ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಗಣಪತಿ‌ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಪ್ರತಿ ವರ್ಷವೂ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಲಾಗುತ್ತದೆ. ಈ ಬಾರಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪತ್ನಿ ಅಂಕಿತಾ, ಪುತ್ರ ಹಾಗೂ ಕಚೇರಿಯ ಸಿಬ್ಬಂದಿಗಳ ಜೊತೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಕಛೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *