ಹೊಸಪೇಟೆ: ಪ್ರಸ್ತುತ ವರ್ಷದಲ್ಲಿ ಜಿಲ್ಲೆಯ ಒಟ್ಟು 6 ತಾಲ್ಲೂಕುಗಳಲ್ಲಿ ರಾಜ್ಯ ವಿಪತ್ತು ನಿರ್ವಹಣಾ ನಿಧಿ ಹಾಗೂ ಕೃಷಿ ಭಾಗ್ಯ ಯೋಜನೆಯನ್ನು ಸಾಮಾನ್ಯ ವರ್ಗದ ರೈತರಿಗೆ 80 ರಷ್ಟು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ 90 ರಷ್ಟು ಸಹಾಯಧನದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ಕ್ಷೇತ್ರ ಬದು ನಿರ್ಮಾಣದಲ್ಲಿ ಸಾಮಾನ್ಯರಿಗೆ 80 ರಷ್ಟು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 90 ರಷ್ಟು ಸಹಾಯಧನ ನೀಡಲಾಗುವುದು. ನೀರು ಸಂಗ್ರಹಣಾ ರಚನೆಗೆ ಸಾಮಾನ್ಯರಿಗೆ 80 ರಷ್ಟು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 90 ರಷ್ಟು ಸಹಾಯಧನ ನೀಡಲಾಗುವುದು.
ನೀರು ಇಂಗದಂತೆ ತಡೆಯಲು ಸಾಮಾನ್ಯರಿಗೆ 80 ರಷ್ಟು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 90 ರಷ್ಟು ಸಹಾಯಧನ ನೀಡಲಾಗುವುದು. ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ನಿರ್ಮಾಣಕ್ಕೆ ಸಾಮಾನ್ಯರಿಗೆ 40 ರಷ್ಟು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 50 ರಷ್ಟು ಸಹಾಯಧನ ನೀಡಲಾಗುವುದು. ಹೊಂಡದಿಂದ ನೀರು ಎತ್ತಲು ಡೀಸೆಲ್, ಪೆಟ್ರೋಲ್, ಸೋಲಾರ್ಪಂಪ್ಸೆಟ್ ನಿರ್ಮಾಣಕ್ಕೆ ಸಾಮಾನ್ಯರಿಗೆ 50 ರಷ್ಟು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 90 ರಷ್ಟು ಸಹಾಯಧನ ನೀಡಲಾಗುವುದು. ನೀರನ್ನು ಬೆಳಗೆ ಹಾಯಿಸಲು ಸೂಕ್ಷ್ಮ ನೀರಾವರಿ ನಿರ್ಮಾಣಕ್ಕೆ ಸಾಮಾನ್ಯರಿಗೆ 90 ರಷ್ಟು, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 90 ರಷ್ಟು ಸಹಾಯಧನ ನೀಡಲಾಗುವುದು.
ಅರ್ಜಿ ನಮೂನೆಯನ್ನು ಸಂಬಂಧಿಸಿದ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದು ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

