Breaking News

ಕೃಷಿ ಇಲಾಖೆ: ಯಂತ್ರೋಪಕರಣಗಳನ್ನು ಖರೀದಿಸಲು ಸಬ್ಸಿಡಿ ದರದಲ್ಲಿ ಸಹಾಯಧನ ಸೌಲಭ್ಯ

ಬೆಂಗಳೂರು: ಕೃಷಿ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಸಹಾಯಧನ ಯೋಜನೆಯಡಿ ಮಿನಿ ಟ್ರ್ಯಾಕ್ಟರ್, ಟಿಲ್ಲರ್, ಪವರ್ ವೀಡರ್ ಸೇರಿದಂತೆ ಇತರೆ ಯಂತ್ರೋಪಕರಣಗಳನ್ನು ಖರೀದಿಸಲು ಸಬ್ಸಿಡಿ ದರದಲ್ಲಿ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರವರೆಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90 ವರೆಗೆ ಸಹಾಯಧನ ನೀಡಲಾಗುತ್ತದೆ.
ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ಒದಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Share News

About BigTv News

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *