Breaking News

ಭಾರೀ ಮಳೆ: ಸಿಡಿಲು ಬಡಿದು 7 ಜನರು ಸಾವು

ಬಲೋದಬಜಾರ್: ಸಿಡಿಲು ಬಡಿದು ಏಳು ಜನರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಲೋದಬಜಾರ್ ಭಟಪರಾ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊಹ್ತಾರಾ ಗ್ರಾಮದಲ್ಲಿ ಭಾನುವಾರ ಸಂಜೆ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ವ್ಯಕ್ತಿಗಳು ಸಿಡಿಲು ಬಡಿದಾಗ ಭಾರಿ ಮಳೆಯ ನಡುವೆ ತಮ್ಮ ಹೊಲದ ಬಳಿಯ ಕೆರೆಯಂಚಿನಲ್ಲಿದ್ದರು ಎನ್ನಲಾಗಿದೆ. ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *