Breaking News

ಮುಡಾ ಹಗರಣ: ಇಂದು ಹೈಕೋರ್ಟ್ ನಲ್ಲಿ ಸಿಎಂ ಅರ್ಜಿ ವಿಚಾರಣೆ

ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಹೈಕೋರ್ಟ್ ನಡೆಸಲಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು.
ಬಳಿಕ ರಾಜ್ಯಪಾಲರು ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್ ನಡೆಸಲಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 19 ರಂದು ಹೈಕೋರ್ಟಿಗೆ 712 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದರು. ಸೆಪ್ಟೆಂಬರ್ 2 ರಂದು ಹೈಕೋರ್ಟ್ ನಲ್ಲಿ ಈ ಒಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ವಿಚಾರಣೆಯನ್ನು ಸೆ.9 ರ ಇಂದು ಮುಂದೂಡಿದ್ದರು.

Share News

About bigtvnews22

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *