Breaking News

ವಿದ್ಯುತ್‌ ಸ್ಪರ್ಶಿಸಿ ಬಾಲಕಿ ಸಾವು

ದೊಡ್ಡಬಳ್ಳಾಪುರ: ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಬಳಿ ಆಟವಾಡುತ್ತಿದ್ದ ಶಾಲಾ ಬಾಲಕಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
ಚೇತನ (12) ಮೃತಪಟ್ಟ ಬಾಲಕಿ. ಕೊನಘಟ್ಟ ಗ್ರಾಮದ ಶ್ರೀನಿವಾಸ ಮೂರ್ತಿ ಮತ್ತು ಲಕ್ಷ್ಮಮ್ಮ ದಂಪತಿ ಮಗಳು.
ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಬಳಿ ಆಟವಾಡುತ್ತಿದ್ದ ಶಾಲಾ ಬಾಲಕಿ ವಿದ್ಯುತ್​​ ಸ್ಪರ್ಶಿಸಿ ಮೃತಪಟ್ಟಿದ್ದಾಳೆ.
ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಪ್ರತಿಷ್ಠಾನೆ ಮಾಡಿದ್ದ ಗಣಪತಿ ಬಳಿ ಆಟವಾಡುತ್ತಿದ್ದ ವೇಳೆ ಚೇತನಳಿಗೆ ವಿದ್ಯುತ್ ಶಾಕ್ ಹೊಡೆದಿದೆ ಎಂದು ಪೊಲೀಸ್ ಇನ್​ಸ್ಪೆಕ್ಟರ್​ ಸಾಧಿಕ್ ಪಾಷ ತಿಳಿಸಿದ್ದಾರೆ. ತಕ್ಷಣ ಬಾಲಕಿ ಚೇತನಳನ್ನು ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಯಲಹಂಕದ ಸ್ಪರ್ಶ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗಿಜಾವ ಐದು ಗಂಟೆಗೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ.
ಬಾಲಕಿ ಚೇತನ ಕೊನಘಟ್ಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಘಟನೆಯಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಬಾಲಕಿಯ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *