ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಬುಧಾಬಿ ಯುವರಾಜ ಶೇಖ್ ಖಾಲೀದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಭಾರತ ಮತ್ತು ಯುಎಇ ನಡುವಿನ ಬಾಂಧವ್ಯ ವೃದ್ಧಿಗಾಗಿ ಚರ್ಚೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಅಬು ಧಾಬಿ ಯುವರಾಜ ಶೇಖ್ ಖಾಲೀದ್ ಅವರು ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ಈ ಸಂದರ್ಭದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿರುವುದಾಗಿ ವರದಿ ವಿವರಿಸಿದೆ.
ನವದೆಹಲಿಯಲ್ಲಿನ ಹೈದರಾಬಾದ್ ಹೌಸ್ ನಲ್ಲಿ ಯುವರಾಜ ಶೇಖ್ ಖಾಲೀದ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು, ಆತ್ಮೀಯವಾಗಿ ಸ್ವಾಗತ ಕೋರಿದ್ದು, ಉಭಯ ದೇಶಗಳ ನಡುವಿನ ಭವಿಷ್ಯದ ಬಾಂಧವ್ಯ ಮತ್ತು ಸಹಕಾರದ ಕುರಿತು ಚರ್ಚೆ ನಡೆಸಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

