Breaking News

ಮುಡಾ ಹಗರಣ ಕುರಿತು ಪ್ರತಿಕ್ರಿಯಿಸಿದ ಟೆಂಗಿನಕಾಯಿ

ಹುಬ್ಬಳ್ಳಿ: ಭ್ರಷ್ಟಾಚಾರ ರಹಿತ ಸರ್ಕಾರ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಅವರೇ ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಬಹುದೊಡ್ಡ ಭ್ರಷ್ಟಾಚಾರದ ಕೂಪದಲ್ಲಿ ನಲುಗುತ್ತಿದೆ.ಈಗಾಗಲೇ ಕೋರ್ಟ್ ನಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದ ವಾದ ವಿವಾದಗಳು ನಡೆಯುತ್ತಿದೆ. ಆದರೆ ವಿಚಾರಣೆ ನಡೆಯುತ್ತಿರುವಾಗಲೇ ಸಿಎಂ ಕುರ್ಚಿಗೆ ಬಹುತೇಕ ಕಾಂಗ್ರೆಸ್ ನಾಯಕರು ಟವಲ್ ಹಾಕಿರುವುದನ್ನು ನೋಡಿದರೇ ನಿಜಕ್ಕೂ ಅಚ್ಚರಿಯಾಗುತ್ತದೆ ಎಂದರು.

ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಕುರ್ಚಿಯಿಂದ ಇಳಿಸುವ ಎಲ್ಲ ಕಾರ್ಯತಂತ್ರ ನಡೆಯುತ್ತಿವೆ. ಎಂ.ಬಿ.ಪಾಟೀಲ, ಸತೀಶ್ ಜಾರಕಿಹೊಳಿ, ಆ‌ರ್.ವಿ.ದೇಶಪಾಂಡೆ ಹೀಗೆ ಬಹುತೇಕ ನಾಯಕರು ಸಿಎಂ ಆಗಲು ತಯಾರಿ ನಡೆಸಿರುವುದನ್ನು ನೋಡಿದರೇ ಸಿದ್ದರಾಮಯ್ಯ ಅವರನ್ನು ಹೊರಹಾಕಲು ತಯಾರಿ ನಡೆದಿದೆ ಎಂದು ಲೇವಡಿ ಮಾಡಿದರು.

Share News

About Shaikh BigTv

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *