Breaking News

ಸಿಎಂ ಹೆಸರಿಗೆ ಕಳಂಕ ತರುವ ಕೆಲಸ ಮಾಡುತ್ತೀದ್ದಾರೆ : ಪ್ರಸಾದ ಅಬ್ಬಯ್ಯ

ಹುಬ್ಬಳ್ಳಿ: ಸಿದ್ದರಾಮಯ್ಯನವರ ಗೌರವಕ್ಕೆ ಕಳಂಕ ತರುವ ಕಾರ್ಯವನ್ನು ಮಾಡುವುದಲ್ಲದೇ ಘನತೆಗೆ ದಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ.ನಲವತ್ತು ವರ್ಷಗಳ ಜನಪ್ರೀಯ ರಾಜಕಾರಣದಲ್ಲಿ ಯಾವುದೇ ಒಂದು ಕಳಂಕವಿಲ್ಲದ ರಾಜಕಾರಣಿ ಸಿದ್ದರಾಮಯ್ಯನವರ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಗೆಲುವು ಶತಸಿದ್ದ. ಈ ಒಂದು ಪ್ರಕರಣದಿಂದ ಸಿದ್ದರಾಮಯ್ಯನವರ ಗೌರವಯುತವಾಗಿ ನಿರ್ದೋಷಿಯಾಗಿ ಹೊರ ಬರುತ್ತಾರೆ ಎಂದು ಅವರು ಭರವಸೆ ನೀಡಿದರು.

ಬಿಜೆಪಿಯವರಿಗೆ ಉತ್ತಮ ರೀತಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಸರ್ಕಾರವನ್ನು ನೋಡಿ ತಳಮಳ ಸೃಷ್ಟಿಯಾಗಿದೆ. ಹೇಗಾದರೂ ಮಾಡಿ ಅಡ್ಡಗಾಲು ಹಾಕಬೇಕು ಎಂದು ಕುತಂತ್ರ ಮಾಡುತ್ತಿದ್ದಾರೆ. ಆದರೆ ಅವಧಿಪೂರ್ಣ ಸಿಎಂ ಸಿದ್ಧರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಹೈ ಕಮಾಂಡ್ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Share News

About Shaikh BigTv

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *