Breaking News

ಬೆಂಗಳೂರು ಉಪ ನಗರ ರೈಲ್ವೆ ಯೋಜನೆ 2026 ಕ್ಕೆ ಪೂರ್ಣ: ವಿ.ಸೋಮಣ್ಣ

ಬೆಂಗಳೂರು: ಬೆಂಗಳೂರು ಉಪನಗರ ರೈಲ್ವೆ ಯೋಜನೆಯ ಕಾಮಗಾರಿಯನ್ನು 2026ರ ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವ ಉದ್ದೇಶವಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ವಿಧಾನಸೌಧದಲ್ಲಿಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ಅವರೊಂದಿಗೆ ನಡೆದ ಉಪನಗರ ರೈಲ್ವೆ ಯೋಜನೆ ಮತ್ತು ರಾಜ್ಯದ ವಿವಿಧ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಮಾತನಾಡಿದರು.
ಉಪನಗರ ರೈಲು ಯೋಜನೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಣ ಮೀಸಲಿಟ್ಟಿದ್ದು, ಕೇಂದ್ರದ ಪಾಲಿನ ಹಣ ಬಿಡುಗಡೆಗೆ ಕ್ರಮ ವಹಿಸುವುದಾಗಿ ತಿಳಿಸಿದರು. ಪ್ರಧಾನಿ ನರೇಂದ್ರಮೋದಿ ಅವರು 148 ಕಿ.ಮೀ ಉಪನಗರ ರೈಲು ಯೋಜನೆಗೆ ಅಡಿಪಾಯ ಹಾಕಿದ್ದರು. ನಾವು ಈಗ 70 ಕಿ.ಮೀ ಉಪನಗರ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದೇವೆ ಎಂದರು.
ಬೈಯಪ್ಪನಹಳ್ಳಿಯಿಂದ ಚಿಕ್ಕಬಾಣವಾರದವರೆಗೆ 26 ಕಿ.ಮೀ ಹಾಗೂ ಈಲರಿಯಿಂದ ರಾಜಾನುಕುಂಟೆ ನಡುವೆ 48 ಕಿ.ಮೀ ಉದ್ದದ ಉಪನಗರ ರೈಲ್ವೆ ಮಾರ್ಗ ನಿರ್ಮಿಸಲು ಉದ್ದೇಶಿಸಲಾಗಿದೆ. ರೈಲ್ವೆ , ಮೆಟ್ರೋ, ಬಿಡಿಎ, ಕಂದಾಯ ಹಾಗೂ ಬಿಬಿಎಂಪಿ ನಡುವೆ ಸಮನ್ವಯದಿಂದ ಉಪನಗರ ರೈಲ್ವೆ ಮಾರ್ಗ ನಿರ್ಮಾಣದ ಕೆಲಸ ಸಾಗಲಿದೆ ಎಂದು ಸಚಿವರು ತಿಳಿಸಿದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *