ಹೊಸಪೇಟೆ: ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ನಗರದ ಹೊರವಲಯಕ್ಕೆ ಭೇಟಿ ನೀಡಿ ವರ್ತುಲ ರಸ್ತೆ ನಿರ್ಮಾಣದ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರೊಂದಿಗೆ ಸಂಚಾರ ಕೈಗೊಂಡ ಅವರು, ರಾಷ್ಟ್ರೀಯ ಹೆದ್ದಾರಿ 50ರಿಂದ ಹೊಸಪೇಟೆ ನಗರಕ್ಕೆ ಸಂಪರ್ಕಕ್ಕೆ ಅಗತ್ಯವಿರುವ ರಿಂಗ್ ರೋಡ್ ಮಾರ್ಗದ ಬಗ್ಗೆ ಚರ್ಚಿಸಿದರು.
ದಿನೇದಿನೆ ಜನ ಸಂಪರ್ಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಿಂಗ್ ರೋಡ್ ನಿರ್ಮಾಣಕ್ಕೆ ಅತ್ಯವಿರುವ ಸ್ಥಳ ಗುರುತಿಸುವುದರ ಬಗ್ಗೆ ಜಿಲ್ಲಾಧಿಕಾರಿಗಳು ಶಾಸಕರೊಂದಿಗೆ ಚರ್ಚಿಸಿ ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರರಾದ ಶೃತಿ ಹಾಗೂ ಇನ್ನೀತರ ಇಲಾಖೆಗಳ ಅಧಿಕಾರಿಗಳು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

