ಬೆಂಗಳೂರು: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಈಗ ಮತ್ತೆ ಅವಕಾಶ ನೀಡಲಾಗಿದೆ. ವೆಬ್ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಕುರಿತು ಸಚಿವ ಮುನಿಯಪ್ಪ ಮಾಹಿತಿ ನೀಡಿದ್ದು, ಈಗಾಗಲೇ ಈ ರೇಷನ್ ಕಾರ್ಡ್ ಗಳ ಅರ್ಜಿಯನ್ನು ಪರಿಶೀಲನೆ ಮಾಡಲಾಗುತ್ತಿದ್ದು ಹೊಸ ರೇಷನ್ ಕಾರ್ಡ್ ಗಳ ವಿತರಣೆಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಮಾಡಲಾಗುತ್ತದೆ. ಹೊಸ ರೇಷನ್ ಕಾರ್ಡ್ ಗಳ ಅರ್ಜಿಯನ್ನು ವಿತರಣೆಯಾದ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ 15 ರಿಂದ 30ನೇ ತಾರೀಕಿನೊಳಗೆ ಯಾವುದಾದರೂ ಒಂದು ದಿನದಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

