Breaking News

ಕಲಾವಿದರಿಗೆ ಭದ್ರತೆ ಕಲ್ಪಿಸುವ ಕುರಿತು ಸೆ.16 ರಂದು ಮಹಿಳಾ ಆಯೋಗದ ಸಭೆ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಕಲಾವಿದೆಯರು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸುವುದು, ಸೌಲಭ್ಯ. ಭದ್ರತೆ ಕಲ್ಪಿಸುವ ಕುರಿತಾಗಿ ಸೆ. 16 ರಂದು ಮಹತ್ವದ ಸಭೆ ನಡೆಯಲಿದೆ.
ಕೇರಳದಲ್ಲಿ ಹೇಮಾ ಸಮಿತಿ ರಚನೆ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಮಿತಿ ರಚನೆ ಕುರಿತಾಗಿ ಫೈರ್ ಸಂಘಟನೆ ಮನವಿ ಮಾಡಿದ್ದ ಹಿನ್ನಲೆಯಲ್ಲಿ ಸಭೆ ಕರೆಯಲಾಗಿದೆ.
ಸೆ. 16 ರಂದು ಬೆಳಗ್ಗೆ 11.30ಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅಧ್ಯಕ್ಷತೆಯಲ್ಲಿ ಫಿಲ್ಮ್ ಚೇಂಬರ್ ನಲ್ಲಿ ಸಭೆ ನಡೆಯಲಿದೆ.
ಸಭೆಯಲ್ಲಿ ಕಲಾವಿದೆಯರು ಎದುರಿಸುತ್ತಿರುವ ಸಮಸ್ಯೆ, ಭದ್ರತೆ, ಸೌಲಭ್ಯಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ಸಭೆಯ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗುವುದು. ಬಳಿಕ ರಾಜ್ಯದಲ್ಲಿ ಸಮಿತಿ ರಚನೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *