Breaking News

ರಾಜ್ಯದಲ್ಲಿ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ಖಾಲಿ ಇರುವ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶದಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿ: 01-01-2016 ರಿಂದ ದಿ:31-12-2020 ರವರೆಗೆ ನಿವೃತ್ತಿ/ನಿಧನ /ರಾಜಿನಾಮೆ ಇತ್ಯಾದಿ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿಮಾಡಲು ಕೆಲವು ಷರತ್ತಿಗೆ ಒಳಪಡಿಸಿ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.
ಈ ಕಚೇರಿಯಿಂದ ಮಾರ್ಗದರ್ಶಿ/ ಸುತ್ತೋಲೆ ಹೊರಡಿಸುವ ಪೂರ್ವದಲ್ಲಿಯೇ ಕೆಲವು ಜಿಲ್ಲಾ ಉಪನಿರ್ದೇಶಕರುಗಳು ಹುದ್ದೆ ಭರ್ತಿ ಅನುಮತಿ ಸಂಬಂಧ ಪ್ರಸ್ತಾವನೆ ಸಲ್ಲಿಸಲು ಆಡಳಿತ ಮಂಡಳಿಗಳಿಗೆ / ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಜ್ಞಾಪನ ನೀಡಿರುವುದು ಉಲ್ಲೇಖ (2) ರ ಪತ್ರದಿಂದ ತಿಳಿದು ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಉಲ್ಲೇಖ(1)ರ ಸರ್ಕಾರದ ಆದೇಶಕ್ಕೆ ಪೂರಕವಾಗಿ ಈ ಕಚೇರಿಯಿಂದ ಸುತ್ತೋಲೆ ಹೊರಡಿಸುವವರೆಗೆ ದಿ: 01-01-2016 ರಿಂದ ದಿ:31-12-2020 ರವರೆಗೆ ನಿವೃತ್ತಿ/ನಿಧನ /ರಾಜಿನಾಮೆ ಇತ್ಯಾದಿ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳ ಭರ್ತಿಗೆ ಯಾವುದೇ ಕ್ರಮ ವಹಿಸಬಾರದಾಗಿ ತಿಳಿಸಿದೆ. ತಪ್ಪಿದಲ್ಲಿ ನಿಮ್ಮನ್ನೇ ನೇರ ಹೊಣೆಗಾರರನ್ನಾಗಿಸಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *