Breaking News

ಪಾಕ್ ಆಕ್ರಮಿತ ಕಾಶ್ಮೀರದ ಜನರಿಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಕರೆ

ಜಮ್ಮು: ಬನ್ನಿ ಭಾರತವನ್ನು ಸೇರಿಕೊಳ್ಳಿ. ನಾವು ನಿಮ್ಮನ್ನು ನಮ್ಮವರೆಂದೇ ಭಾವಿಸಿದ್ದೇವೆ ಎಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರಿಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಕರೆ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಾಂಬನ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಕೇಶ್‌ ಸಿಂಗ್‌ ಠಾಕೂರ್‌ ಪರ ಭಾನುವಾರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಸಿಂಗ್‌, ನಾನು ಪಾಕ್‌ ಆಕ್ರಮಿತ ಕಾಶ್ಮೀರದ ನಿವಾಸಿಗಳಿಗೆ ಒಂದು ಮಾತು ಹೇಳಲು ಬಯಸುತ್ತೇನೆ, ಪಾಕಿಸ್ತಾನ ಸರ್ಕಾರ ನಿಮ್ಮನ್ನು ವಿದೇಶಿಯರೆಂದು ಪರಿಗಣಿಸುತ್ತದೆ. ಆದರೆ ನಾವು ಭಾರತೀಯರು, ನಿಮ್ಮನ್ನು ನಮ್ಮವರು ಎಂದೇ ಭಾವಿಸುತ್ತೇವೆ. ಹೀಗಾಗಿ ಬಂದು ನಮ್ಮನ್ನು ಸೇರಿಕೊಳ್ಳಿ ಎಂದು ಕರೆ ನೀಡಿದರು.
ಇದೇ ವೇಳೆ ಅಧಿಕಾರಕ್ಕೆ ಬಂದರೆ ರದ್ದಾಗಿರುವ 370ನೇ ವಿಧಿ ಮರುಸ್ಥಾಪನೆಯ ಕುರಿತು ಭರವಸೆ ನೀಡಿರುವ ನ್ಯಾಷನಲ್‌ ಕಾನ್ಫರೆನ್ಸ್‌ ಮತ್ತು ಕಾಂಗ್ರೆಸ್‌ ಬಗ್ಗೆ ಕಿಡಿಕಾರಿರುವ ಸಿಂಗ್‌, ಬಿಜೆಪಿ ಇರುವವರೆಗೂ ಅದು ಸಾಧ್ಯವಾಗದು ಎಂದು ಸವಾಲು ಹಾಕಿದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *