ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಡೆ ಇಂದಿನಿಂದ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸೆ.9 ರಿಂದ 11 ರವರೆಗೆ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

