Breaking News

ಸೆ.17 ರಂದು ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ

ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಸೆಪ್ಟೆಂಬರ್ 17 ರಂದು ಮಧ್ಯಾಹ್ನ 12 ಗಂಟೆಗೆ ಭಗವಾನ ಶ್ರೀ ವಿಶ್ವಕರ್ಮ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.

ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಪ್ರತಿವರ್ಷದಂತೆ ಆಚರಿಸೋಣ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿಶ್ವಕರ್ಮ ಸಮಾಜದ ಹಿರಿಯ ಮುಖಂಡರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.

Share News

About Shaikh BigTv

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *