Breaking News

2030 ರ ವೇಳೆಗೆ ಶೇ.30 ರಷ್ಟು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಗುರಿ: ಕೇಂದ್ರ ಸಚಿವ ಎಚ್ಡಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ 2030ರ ವೇಳೆಗೆ ಶೇ.30ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಮಾಡಲು ಗುರಿ ನಿಗದಿಪಡಿಸಲಾಗಿದ್ದು, ಆ ಗುರಿ ಮುಟ್ಟಲು ಸರ್ವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ವಿಶ್ವ ಎಲೆಕ್ಟ್ರಿಕ್ ವಾಹನ ದಿನ ಅಂಗವಾಗಿ ಭಾರತೀಯ ಅಟೋಮೊಬೈಲ್ ಸೊಸೈಟಿ ಹಮ್ಮಿಕೊಂಡಿದ್ದ ಎರಡನೇ ಆವೃತ್ತಿಯ ಎಲೆಕ್ಟ್ರಿಕ್ ವಾಹನಗಳ ರಾಲಿಯನ್ನು ಸಚಿವರು ನವದೆಹಲಿಯ ಭಾರತ್ ಮಂಟಪದಲ್ಲಿ ಉದ್ಘಾಟಿಸುವ ಮುನ್ನ ಮಾತನಾಡಿದ ಅವರು, ಪ್ರಧಾನಿಗಳು ನಿಗದಿಪಡಿಸಿರುವ ಗುರಿ ಮುಟ್ಟಲು ಈಗಾಗಲೇ ಅನೇಕ ನೀತಿಗಳನ್ನು ರೂಪಿಸಲಾಗಿದ್ದು, ಹಲವಾರು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಎಲೆಕ್ಟ್ರೀಕ್ ವಾಹನ ಉದ್ಯಮವೂ ಭಾರತದಲ್ಲಿ ವೇಗಗತಿಯಲ್ಲಿ ಬೆಳೆಯುತ್ತಿದೆ ಎಂದು ಹೇಳಿದರು.
ಪರಿಸರಕ್ಕೆ ಪೂರಕವಾದ ರೀತಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದು, ಗ್ರಾಹಕರಿಗೆ ಸುಲಭವಾಗಿ ಕೈಗೆಟುಕುವಂತೆ ಕ್ರಮ ವಹಿಸಲಾಗಿದೆ ಫೇಮ್ 2 ಯೋಜನೆಯು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳ ತಯಾರಿಕೆಗೆ ಕೊಡಲಾಗುತ್ತಿರುವ ಪ್ರೋತ್ಸಾಹವನ್ನು ಮುಂದುವರಿಸಲಾಗುವುದು. ಇದಕ್ಕೆ ₹15,500 ಕೋಟಿ ಹಣವನ್ನು ಒದಗಿಸಲು ಬಜೆಟ್ ನಿರ್ಧರಿಸಲಾಗಿದ್ದು , ಮಾಲಿನ್ಯ ಕಡಿಮೆ ಮಾಡುವುದು ಮತ್ತು ದೇಶಾದ್ಯಂತ ಸಾರ್ವಜನಿಕ ಸಾರಿಗೆಯನ್ನು ವಿದ್ಯುದೀಕರಿಸಲು ಈ ಮೊತ್ತವನ್ನು ಮೀಸಲಿಡಲಾಗಿದೆ ಎಂದು ಸಚಿವರು ಹೇಳಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *