Breaking News

ಕಲಬುರಗಿ: ಸಚಿವ ಸಂಪುಟ ಸಭೆಯ ಕುರಿತು ಪೂರ್ವಭಾವಿ ಸಭೆ

ಕಲಬುರಗಿ: ಸಂವಿಧಾನದ ಕಲಂ 371 ಜೆ ಜಾರಿಗೆ ಬಂದು ಹತ್ತು ವರ್ಷಗಳು ಆದ ಈ ಸಂದರ್ಭದಲ್ಲಿ ಕಲಬುರಗಿ ಯಲ್ಲಿ ಸೆಪ್ಟೆಂಬರ್ 17 ರಂದು ನಡೆಯಲಿರುವ ದಶಮಾನೋತ್ಸವ ಏರ್ಪಡಿಸಲಾಗಿದೆ ಹಾಗೂ‌ ಹತ್ತು ವರ್ಷಗಳ ನಂತರ ನಡೆಯುತ್ತಿರುವ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು ಈ ಭಾಗದ ಸಮಗ್ರ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರಗಿ ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿ, ಈಗಾಗಲೇ ಎರಡು ಮೂರು ಸಭೆ ನಡೆಸಿದ್ದರಿಂದ ಒಂದು ಕ್ಲಾರಿಟಿ ಸಿಕ್ಕಿದೆ.‌ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು, ಕೈಗಾರಿಕೆ ನೀತಿ ರೂಪಿಸುವುದು ಸೇರಿದಂತೆ ಉದ್ಯೋಗ ಸೃಷ್ಠಿಸಲು ಬೇಕಾದ ಅಗತ್ಯ ಕ್ರಮ ಕೈಗೊಳ್ಳುವ ದೃಷ್ಠಿಯಿಂದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಈ ನಿಟ್ಟಿನಲ್ಲಿ ಕಕ ಭಾಗದ ಶಾಸಕರ, ಸಂಘ ಸಂಸ್ಥೆಗಳಿಂದ ಅಭಿವೃದ್ದಿ ಕಾಮಗಾರಿಗಳ ಬಗ್ಗೆ ಬೇಡಿಕೆ ಸಲ್ಲಿಸಿದ್ದಾರೆ.
ಬೇಡಿಕೆ ಹಾಗೂ ಸಲಹೆಗಳ ಜೊತೆಗೆ ಸರ್ಕಾರದ ಮಟ್ಟದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳ ಬಗ್ಗೆ ಪರೀಶೀಲನೆ ನಡೆಸಿ, ಮೈಕ್ರೋ ಹಾಗೂ ಮ್ಯಾಕ್ರೋ ಬೇರ್ಪಡಿಸಿ ಅದಕ್ಕೆ ತಕ್ಕಂತೆ ಪಟ್ಟಿಯನ್ನು ತಯಾರಿಸಿ‌ ನಂತರ ಸರ್ಕಾರದ ಮುಖ್ಯ ಕಾರ್ಯದರ್ಶಿಯೊಂದಿಗೆ ಮಾತನಾಡಿ ಆ ನಂತರ ಸಿಎಂ ಜತೆ ಚರ್ಚಿಸಿ ಯಾವ ವಿಷಯಗಳು ಸಚಿವ ಸಂಪುಟದ ಚರ್ಚೆಗೆ ತರಬೇಕು ಎಂದು ನಿರ್ಣಯ ಕೈಗೊಳ್ಳಲಿದ್ದೇವೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *