Breaking News

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದ ರಾಜ್ಯಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1,001 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ರಾಜ್ಯ ಸರ್ಕಾರವು ಗಜೆಟ್ ಅಧಿಸೂಚನೆ ಪ್ರಕಟಿಸಿದೆ.
ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ ಇಡಿ 92 ಡಿಸಿಇ 2023 (ಇ), ದಿನಾಂಕ:03.11.2023 ರಲ್ಲಿ ಪ್ರಕಟಿಸಿದೆ.
ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಸಹಾಯಕ ಪ್ರಾಧ್ಯಾಪಕರ ನೇಮಕಾತಿ) (ವಿಶೇಷ) ನಿಯಮಗಳು, 2020 ನಿಯಮ 9 ರ ಉಪನಿಯಮ (2) ಮತ್ತು (3) ರನ್ನಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಢೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ಪೂರ್ಣಗೊಂಡಿರುವ ಈ ಕೆಳಕಂಡ ಅಭ್ಯರ್ಥಿಗಳನ್ನು ವೇತನ ಶ್ರೇಣಿ ರೂ.57700- 182400 (ಯುಜಿಸಿ ವೇತನ ಶ್ರೇಣಿ) ರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿ ಆದೇಶಿಸಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *